ಮಳೆ ಹಾನಿ; ಹಳೇ ಕಾಮಗಾರಿ ಆಗಸ್ಟ್ 20ರ ಒಳಗೆ ಪೂರ್ಣಗೊಳಿಸಿ ಇಲ್ಲದಿದ್ರೆ ತನಿಖೆ ಎದುರಿಸಿ: ಅನ್ಬುಕುಮಾರ್ ಎಚ್ಚರಿಕೆ

ಮಳೆ ಹಾನಿ ಸಂಬಂಧಿಸಿದಂತೆ ಈಗಾಗಲೇ ಅನುಮೋದನೆಗೊಂಡ ಹಳೇ ಕಾಮಗಾರಿಗಳನ್ನು ಆಗಸ್ಟ್ 20 ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ತನಿಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಎಂಜಿನಿಯರ್‍ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಅವರು ಎಚ್ಚರಿಸಿದ್ದಾರೆ.

ಪ್ರಾಕೃತಿಕ ವಿಕೋಪ ಮುಂಜಾಗ್ರತೆ ಹಾಗೂ ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದ ಅವರು ಹಳೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪೂರ್ಣಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಿಲ್ಲನ್ನು ಸಲ್ಲಿಸಬೇಕು.ಯಾವುದೇ ಕಾರಣಕ್ಕೂ ವಿಳಂಭ ಮಾಡಬಾರದು.ಜೊತೆಗೆ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.

ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಭಾರೀ ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಬೇಕು. ಜಿಲ್ಲಾಧಿಕಾರಿಯವರಿಗೆ ವರದಿ ನೀಡಬೇಕು. ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಈಗಾಗಲೇ ಹಳೇ ಕಾಮಗಾರಿಗಳು ಹಾಗೂ ಪ್ರಸಕ್ತ ವರ್ಷದಲ್ಲಿ ಮಳೆಹಾನಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಲಾಗಿದೆ. ಮುಂಗಾರು ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ ಎಂದು ಸೂಚಿಸಿದರು.

error: Content is protected !!