ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಗೆ ಕೊರೋನಾ ಪಾಸಿಟಿವ್!

ನವದೆಹಲಿ: ಭಾರತ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಮತ್ತೊಂದು ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದ್ದು, ರೋಡ್ ಸೇಫ್ಟಿ ವರ್ಲ್ಡ್‌ ಸೀರಿಸ್‌ ಟೂರ್ನಿಯಲ್ಲಿ ಇಂಡಿಯಾ ಲೆಜೆಂಡ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಸ್ಟಾರ್ ಆಲ್ರೌಂಡರ್ ಇರ್ಫಾನ್‌ ಪಠಾಣ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೌದು, ಸಚಿನ್‌ ತೆಂಡುಲ್ಕರ್, ಯೂಸುಫ್ ಪಠಾಣ್‌, ಎಸ್‌, ಬದರಿನಾಥ್‌ ಬಳಿಕ ಇದೀಗ ಇರ್ಫಾನ್‌ ಪಠಾಣ್‌ ಕೂಡಾ ಕೊರೋನಾ ಹೆಮ್ಮಾರಿಯ ವಕ್ರದೃಷ್ಟಿಗೆ ಪಾತ್ರರಾಗಿದ್ದಾರೆ. ಇನ್ನೂ ಆತಂಕಕಾರಿ ಸಂಗತಿಯೆಂದರೆ ಇರ್ಫಾನ್‌ ಪಠಾಣ್‌ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿ ವೇಳೆ ಕಾಮೆಂಟರಿ ಬಾಕ್ಸ್‌ನಲ್ಲೂ ಕಾಣಿಸಿಕೊಂಡಿದ್ದರು.

ಈ ಕುರಿತಂತೆ ಟ್ವೀಟ್‌ ಮಾಡಿರುವ ಇರ್ಫಾನ್ ಪಠಾಣ್‌, ನನಗ್ಯಾವ ಕೋವಿಡ್ ಲಕ್ಷಣಗಳಿಲ್ಲದಿದ್ದರೂ, ನನಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ನಾನೀಗ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಒಮ್ಮೆ ಕೋವಿಡ್ ಟೆಸ್ಟ್‌ ಮಾಡಿಸಿಕೊಳ್ಳಿ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಸಚಿನ್‌, ಯೂಸುಫ್‌ ಬಳಿಕ ಮತ್ತೊಬ್ಬ ಮಾಜಿ ಕ್ರಿಕೆಟಿಗನಿಗೆ ವಕ್ಕರಿಸಿದ ಕೊರೋನಾ ಸೋಂಕು

ರಾಯ್ಪುರದಲ್ಲಿ ನಡೆದ ಚೊಚ್ಚಲ ಆವೃತ್ತಿಯ ರೋಡ್ ಸೇಫ್ಟಿ ಟೂರ್ನಿಯಲ್ಲಿ ಶ್ರೀಲಂಕಾ ಲೆಜೆಂಡ್ ತಂಡವನ್ನು ಮಣಿಸಿದ ಸಚಿನ್‌ ತೆಂಡುಲ್ಕರ್ ನೇತೃತ್ವದ ಇಂಡಿಯನ್ ಲೆಜೆಂಡ್ಸ್‌ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

error: Content is protected !!
satta king chart