ಮಾಧ್ಯಮಗಳಲ್ಲಿ ಸಾವಿನ ದೃಶ್ಯ ಪ್ರಸಾರಕ್ಕೆ ವಿರೋಧ: ವೀಕ್ಷಕರಿಗೆ ಚಾನಲ್ ಬದಲಿಸುವ ಆಯ್ಕೆಯೂ ಇದೆ ಎಂದ ಹೈಕೋರ್ಟ್…!!

ಕೊರೋನಾದಿಂದ ಮೃತಪಟ್ಟವರ ಸುದ್ದಿಗಳನ್ನು ಪ್ರಸಾರ ಮಾಡುವ ಮಾಧ್ಯಮಗಳಲ್ಲಿ ನಿರ್ಬಂಧ ಕೋರಿ ಲೆಟ್ಸ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ಅನ್ನ ಹೈಕೋರ್ಟ್ನ ವಿಭಾಗೀಯ ಪೀಠ ಇತ್ಯರ್ಥ ಪಡಿಸಿದೆ. ಈ ಮೂಲಕ ವೀಕ್ಷಕರಿಗೆ ಚಾನಲ್ ಬದಲಿಸುವ ಆಯ್ಕೆಯೂ ಇದೆ ಅನ್ನೋ ಅಭಿಪ್ರಾಯವನ್ನು ಕೋರ್ಟ್ ವ್ಯಕ್ತಪಡಿಸಿದೆ.
ಮಾಧ್ಯಮಗಳು ಕೋವಿಡ್ನಿಂದ ನರಳುವ ಸಾವಿನ ದೃಶ್ಯ ಪ್ರಸಾರ ಮಾಡಿ ಜೀವಭಯದ ಫೋಬಿಯಾ ಹುಟ್ಟಿಸುತ್ತಿವೆ. ಸೋಂಕಿತರಲ್ಲಿ ಸಾವಿನ ಭೀತಿ ಹುಟ್ಟಿಸುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡುತ್ತಿವೆ. ಇದು ಜನರಲ್ಲಿ ಭಯ, ಆತಂಕ, ಖಿನ್ನತೆ ಮೂಡಿಸುತ್ತಿವೆ. ಚಿತಾಗಾರಗಳ ದೃಶ್ಯಗಳನ್ನು ಪ್ರಸಾರ ಮಾಡಲಾಗುತ್ತಿದೆ. ಇದರಿಂದಾಗಿ ವೀಕ್ಷಕರಿಗೆ ಮಾನಸಿಕ ಒತ್ತಡ ಉಂಟಾಗಿ ಸಾವು ಸಂಭವಿಸಬಹುದು. ಹೀಗಾಗಿ ಮಾಧ್ಯಮಗಳ ವಿರುದ್ಧ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆಯಡಿ ಕ್ರಮಕೈಗೊಳ್ಳಲು ಅರ್ಜಿದಾರರು ಕೋರ್ಟ್ಗೆ ಮನವಿ ಮಾಡಿದ್ದರು.

ಇದರ ವಿಚಾರಣೆ ನಡೆಸಿದ ಕೋರ್ಟ್, ಈ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅಂತಾ ಅರ್ಜಿದಾರರಿಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.ಅಲ್ಲದೇ ವೀಕ್ಷಕರಿಗೆ ಚಾನಲ್ ಬದಲಿಸುವ ಆಯ್ಕೆಯೂ ಇದೆ. ಬೇರೆ ಉತ್ತಮವಾದುದ್ದನ್ನು ವೀಕ್ಷಿಸಲು ಚಾನಲ್ ಬದಲಿಸಬಹುದು ಅಂತಾ ಸಿಜೆ ಎಎಸ್ ಒಕಾ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

error: Content is protected !!