ಮಾನವ-ಪ್ರಾಣಿ ಸಂಘರ್ಷ ಪ್ರದೇಶ ವ್ಯಾಪ್ತಿ ಮತಗಟ್ಟೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ: ಡಿಸಿ

ಕೊಡಗು: ಮಾನವ ಮತ್ತು ಪ್ರಾಣಿ ಸಂಘರ್ಷ ಹಾಗೂ ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಯಲ್ಲಿನ ಮತಗಟ್ಟೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪೊಲೀಸ್, ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಆನೆ ಮತ್ತು ಮಾನವ ಸಂಘರ್ಷ ಪ್ರದೇಶಗಳ ವ್ಯಾಪ್ತಿಯಲ್ಲಿನ ಮತಗಟ್ಟೆಗೆ ತೆರಳುವ ಅಧಿಕಾರಿಗಳಿಗೆ ರಾಪಿಡ್ ರೆಸ್ಪಾನ್ಸ್ ತಂಡದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದ್ದು,
ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಗಳಲ್ಲಿ ಎಎನ್‍ಎಫ್ ತಂಡದ ಮೂಲಕ ಸೂಕ್ತ ರಕ್ಷಣೆ ಒದಗಿಸುವುದು. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆ ವ್ಯಾಪ್ತಿಯಲ್ಲಿನ ಮತಗಟ್ಟೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಮತಗಟ್ಟೆ ಕೇಂದ್ರಗಳಲ್ಲಿ ಅಗತ್ಯ ಪೊಲೀಸರನ್ನು ನಿಯೋಜಿಸುವುದು. ಹಾಗೆಯೇ ಮತದಾನದ ಹಿಂದಿನ ದಿನ ಮತ್ತು ಮತದಾನದಂದು ಮತಗಟ್ಟೆ ಅಧಿಕಾರಿಗಳು, ಪೊಲೀಸರು, ಆರೋಗ್ಯ ಕಾರ್ಯಕರ್ತರು ಇತರರಿಗೆ ಊಟದ ವ್ಯವಸ್ಥೆಯನ್ನು ತಾ.ಪಂ.ಯಿಂದ ಮಾಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

error: Content is protected !!