ಮಾಹಿತಿ ನೀಡಲು ಮನವಿ

ಕೊಡಗು-ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಉಚ್ಚ ನ್ಯಾಯಾಲಯದ ಆದೇಶದಂತೆ ಭಾರತ ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿದೆ.

ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳು 2020-21 ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು ಮುಖ್ಯವಾಹಿನಿಗೆ ತರಲು ಮನೆ ಮನೆ ಸಮೀಕ್ಷೆ ಕೈಗೊಳ್ಳಲು ಸೂಚಿಸಿರುವುದರಿಂದ ನಗರಸಭೆ ಕಚೇರಿಯ ಸಿಬ್ಬಂದಿಗಳು ಮನೆ ಮನೆ ಸಮೀಕ್ಷೆಗೆ ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡುವಂತೆ ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ಕೋರಿದ್ದಾರೆ.

error: Content is protected !!