fbpx

ಮಾ.18 ರಂದು ಉದ್ಯೋಗ ಮೇಳ

ಮಡಿಕೇರಿ ಮಾ.14(ಕರ್ನಾಟಕ ವಾರ್ತೆ):-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್, 18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್, ಮೈಸೂರು, ಕ್ಲಬ್ ಮಹೀಂದ್ರ, ಮಡಿಕೇರಿ, ಹಿಮತ್ಸಿಂಕಾ ಲೈನ್ಸ್, ಹಾಸನ, ಹ್ಯೂಂಡಾಯಿ, ಮಡಿಕೇರಿ, ಮಾಂಡೋವಿ ಮೋಟಾರ್ಸ್, ಜಸ್ಟ್ ಡಯಲ್, ಬೆಂಗಳೂರು, ಗ್ರಾಸ್ ರೂಟ್ಸ್, ಮೈಸೂರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.

error: Content is protected !!