fbpx

ಮುಂದುವರೆದ ರೈತ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಈಡೇರಿಸುವಂತೆ ಒತ್ತಾಯಿಸಿ ಸೋಮವಾರಪೇಟೆಯ ಜೇಸಿ ವೇದಿಕೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದೆ.

ಕಾಫಿ ಬೆಳೆಗಾರರ ಪಂಪ್ ಸೆಟ್ ಗಾಗಿ ಉಚಿತ ವಿದ್ಯುತ್, ಕಾಫಿ,ಕಾಳುಮೆಣಸು, ಏಲಕ್ಕಿ ಬೆಳೆಗಳಿಗೆ ಬೆಂಬಲ ಬೆಲೆ(ಎಂ.ಎಸ್.ಪಿ) ನೀಡಬೇಕು, ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು,ಪ್ರಕೃತಿ ವಿಕೋಪ ಪರಿಹಾರ ನೀಡಲು ಶಾಶ್ವತ ನಿಧಿ ಸ್ಥಾಪನೆಗೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಹೋರಾಟಗಾರ ಕೂಗೂರು ಜಯಪ್ರಕಾಶ,ಲಿಂಗರಾಜ ರಾಜೇಶ್, ಮಂದಣ್ಣ ಸೇರಿದಂತೆ ಇತರರು ಇದ್ದರು.

error: Content is protected !!