ಮೇ 28 ರಂದು ವಿದ್ಯುತ್ ವ್ಯತ್ಯಯ

ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು, ಮೇ 28 ರಂದು ಬೆಳಗ್ಗೆ 09 ರಿಂದ ಮಧ್ಯಾಹ್ನ 03 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್

ಇಇ ಅಶೋಕ ಅವರು ತಿಳಿಸಿದ್ದಾರೆ.
66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಹಾಗೂ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರಿ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಅಯ್ಯಂಗೇರಿ ಹಾಗೂ ಸುತ್ತ ಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅವರು ಕೋರಿದ್ದಾರೆ.

error: Content is protected !!