ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಮೇಲೆ ನಗರ ಠಾಣೆಯಲ್ಲಿ ದೂರು ದಾಖಲು

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾಜಿ ಸಿ ಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಮತ್ತು ಬ್ಯಾನರ್ ಹರಿದ ಪ್ರಕರಣ ಸಂಬಂಧ 9 ಮಂದಿ ಬಿಜೆಪಿ ಕಾರ್ಯಕರ್ತರ ಮೇಲೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ದೂರನ್ನು ನೀಡಿದ್ದು, ಗುರುತಿಸಿರುವ 9 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

error: Content is protected !!