fbpx

ಪ್ರಧಾನಿ ಮೋದಿ ಹುಟ್ಟು ಹಬ್ಬವನ್ನು ನಿರುದ್ಯೋಗಿಗಳ ದಿನವನ್ನಾಗಿ ಆಚರಿಸುವುದು ಸೂಕ್ತ ಎಂದು ರಾಗ ಎಳೆದ ರಾಗಾ

ಸೆಪ್ಟೆಂಬರ್ 17ರ ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಳು ದಶಕಗಳಿಂದ ಭಾರತದಲ್ಲಿ ಕಣ್ಮರೆಯಾಗಿದ್ದ ಚೀತಾಗಳನ್ನು ಮರು ಪರಿಚಯಿಸಿದ್ದಾರೆ. ನಮೀಬೀಯಾದಿಂದ ಭಾರತಕ್ಕೆ ತಂದಿದ್ದ ಎಂಟು ಚೀತಾಗಳನ್ನು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ – ಪಾಲ್ಪುರ್ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ‘ಭಾರತ್ ಜೋಡೋ’ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ 8 ಚೀತಾಗಳು ಬಂದವು. ಆದರೆ ಈ ಎಂಟು ವರ್ಷಗಳಲ್ಲಿ ನೀವು ನೀಡಿದ ಭರವಸೆಯಂತೆ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರ ಜನ್ಮದಿನದಂದು ಯುವ ಜನತೆ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುವುದು ಸೂಕ್ತ ಎಂಬ ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿಸುವ ಭರವಸೆ ನೀಡಿದ್ದು, ಹೀಗಾಗಿ ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗ ಎಲ್ಲಿ? ಎಂದು ಪ್ರಶ್ನೆಯನ್ನು ರಾಹುಲ್ ಗಾಂಧಿ ಕೇಳಿದ್ದಾರೆ.

error: Content is protected !!