ಮೋದಿ ಜನ್ಮ ದಿನ ಅಂಗವಾಗಿ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಕಾರ್ಯ

ಮೋದಿ ಜನ್ಮದಿನದ ಅಂಗವಾಗಿ ಜನ ಸಾಮಾನ್ಯರಿಗೆ ಸರ್ಕಾರದ ಕಾರ್ಯವೈಖರಿಯನ್ನು ತಿಳಿಸುವ ನಿಟ್ಟಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೆ.17 ರಿಂದ ಅ.2ರ ವರೆಗೆ ಸೇವಾ ಪಾಕ್ಷಿಕ (ಸೇವೆಗಾಗಿ 15 ದಿನ ) ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಹಾಗೂ 15 ದಿನಗಳ ಕಾಲ ಅನೇಕ ಸೇವಾ ಚಟುವಟಿಕೆಗಳನ್ನು ನಡೆಸಿ ಅವುಗಳ ಮೂಲಕ ಪ್ರಧಾನಿಗಳ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸಲಿದ್ದೇವೆ ಎಂದು ಜಿಲ್ಲಾ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಉಪಾಧ್ಯಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಹ ಪ್ರಮುಖ್ ಸುವಿನ್ ಗಣಪತಿ, ಬಿಜೆಪಿ ವಕ್ತಾರ ಮಹೇಶ್ ಜೈನಿ, ಉಪಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.

error: Content is protected !!