ಯಾವುದೇ ಪಾಸ್ ನೀಡಲ್ಲ: ಕಮಲ್ ಪಂತ್ ಸ್ಪಷ್ಟನೆ

ಬೆಂಗಳೂರು,ಏ.28: ಇಂದಿನಿಂದ ಮೇ 12ರವರೆಗೆ ವಿಧಿಸಿರುವ ಲಾಕ್‍ಡೌನ್ ಅವಧಿಯಲ್ಲಿ ಯಾವುದೇ ರೀತಿಯ ಪಾಸ್‍ಗಳನ್ನು ಬೆಂಗಳೂರು ನಗರ ಪೊಲೀಸ್ ವತಿಯಿಂದ ವಿತರಿಸಲಾಗುತ್ತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಉದ್ದೇಶಕ್ಕಾಗಿ ಯಾವುದೇ ರೀತಿಯ ಪಾಸ್‍ಗಳನ್ನು ವಿತರಿಸಲಾಗುತ್ತಿಲ್ಲ. ಸರ್ಕಾರದ ಆದೇಶದಲ್ಲಿ ವಿನಾಯ್ತಿ ನೀಡಿರುವ ಸೇವೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ಸ್ಥಳಗಳಿಗೆ ಗುರುತಿನ ಚೀಟಿ ಅಥವಾ ಸಮರ್ಥನೀಯ ದಾಖಲಾತಿಗಳನ್ನು ಹಾಜರುಪಡಿಸಿ ಪ್ರಯಾಣಿಸಬಹುದೆಂದು ಅಯುಕ್ತರು ಸ್ಪಷ್ಟೀಕರಣ ನೀಡಿದ್ದಾರೆ.

error: Content is protected !!