ಯೋಧನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಅಪಘಾತ ನೆಪದಲ್ಲಿ ಯೋಧನ ಹಾಗು ಆತನ ಕುಟುಂಬದ ಮೇಲೆ ಹಲ್ಲೆ ಮಾಡಿ ಅವರ ಚಿನ್ನಾಭರಣಗಳನ್ನು ದೋಚಿದ ಮತಾಂಧರನ್ನು ಬಂಧಿಸುವಂತೆ ಒತ್ತಾಯಿಸಿ ಜನಲರ್ ತಿಮ್ಮಯ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ರಸ್ತೆ ತಡೆ ನಡೆಯುತ್ತಿದೆ.

ಜನರಲ್ ತಿಮ್ಮಯ್ಯ ವೃತ್ತದಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆಗೆ ಬೆಂಬಲ ನೀಡಿ, ಬಹಳ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಗೌಡ ಹಾಗು ಕೊಡವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲ ಇದಕ್ಕೆ ವ್ಯಕ್ತವಾದ ಪರಿಣಾಮ ಅಭೂತಪೂರ್ವ ಯಶಸ್ಸನ್ನು ಈ ಪ್ರತಿಭಟನೆ ಕಾಣುತ್ತಿದೆ.

ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಈ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ. ಹಿಂದು ಜಾಗರಣಾ ವೇದಿಕೆ ಕರೆ ನೀಡಿದ್ದ ಪ್ರತಿಭಟನೆಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಎ.ಬಿ.ವಿ.ಪಿ, ಬಿಜೆಪಿ ಯುವ ಮೋರ್ಚಾ, ಹಿಂದೂ ಮಳಿಯಾಳಿ ಸಂಘ ಕೂಡ ನೇತೃತ್ವವನ್ನು ವಹಿಸಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗು ಪೊಲೀಸ್ ವರಿಷ್ಠಾಧಿಕಾರಿಗಳು ಬಂದು ಅಹವಾಲುಗಳನ್ನು ಕೇಳುವಂತೆ ಒತ್ತಾಯಿಸಲಾಗುತ್ತಿದೆ.

error: Content is protected !!