ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ…

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕೊಡಗು ಜಿಲ್ಲಾ ವತಿಯಿಂದ ಛತೀಸ್ ಘಡದಲ್ಲಿ ನೆಡೆದ ನಕ್ಸಲ್ ದಾಳಿಯಲ್ಲಿ ಮೃತಪಟ್ಟ ದೇಶದ ವೀರ ಯೋಧರಿಗೆ ಪುಷ್ಪ ನಮನ ಹಾಗೂ ದೀಪ ಬೆಳಗುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ದರ್ಶನ್ ಜೋಯಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಮನು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಾದಪ್ಪ, ಯುವ ಮೋರ್ಚಾ ರಾಜ್ಯ ಸಮಿತಿ ಸದ್ಯಸರಾದ ಮಹೇಶ್ ತಿಮ್ಮಯ್ಯ, ಜಿಲ್ಲಾ ಸಹ ವಕ್ತರರಾದ ದೀಪಕ್, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಮೋಹಿತ್, ಪ್ರವೀಣ್ ಮಲ್ಲಜೀರ ಹಾಗೂ ಯುವ ಮೋರ್ಚಾ ಕಾರ್ಯಕರ್ತರು, ಹಿಂದು ಸಂಘಟನೆ ಪ್ರಮುಖರು ಹಾಜರಿದ್ದರು.