ರಂಜನ್ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ನಿರಂತರ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಡಿಕೇರಿ ಕ್ಷೇತ್ರದ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು, ಈ ಮೂಲಕ ಭಾರತೀಯ ಜನತಾ ಪಕ್ಷ ಕೊಡಗಿನ ಹಾಗೂ ಕೊಡವರ ಋಣ ತೀರಿಸಬೇಕಿದೆ ಎಂದು ಜಿಲ್ಲೆಯಲ್ಲಿ ಸ್ವಾತಂತ್ರ್ಯ ಪೂರ್ವದ ಇತಿಹಾಸವಿರುವ 1942ರ ಪೂರ್ವದ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜ ಹಾಗೂ ಅದರ ಅಂಗಸಂಸ್ಥೆಗಳು ಒತ್ತಾಯಿಸಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಕೊಡವ ಜನಾಂಗದ ಪ್ರತಿನಿಧಿಯೂ ಆಗಿರುವ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಮಂತ್ರಿ ಸ್ಥಾನ ನೀಡುವ ಮೂಲಕ ಅವರಿಗೆ ಕೊಡಗಿನ ಉಸ್ತುವಾರಿಯನ್ನು ನೀಡಬೇಕಿದೆ ಎಂದು ವಿವಿಧ ಕೊಡವ ಈ ಮೂಲಕ ಸರಕಾರ ಕೊಡಗಿನ ಋಣ ತೀರಿಸಲು ಕೊಡವ ಸಮಾಜ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಒತ್ತಾಯಿಸಿದೆ.

error: Content is protected !!