ರಕ್ತ ದಾನ ಮಾಡಿ ಜೀವ ಉಳಿಸಿ: ಶಾಸಕ ಬೋಪಯ್ಯ ಕರೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ನಡೆದ ರಕ್ತದಾನ ಶಿಬಿರಕ್ಕೆ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರು ಶನಿವಾರ ಚಾಲನೆ ನೀಡಿದರು.

ನಗರದ ರೆಡ್‌ಕ್ರಾಸ್ ಭವನದಲ್ಲಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕರು ಸೆ.17 ರಿಂದ ಅ.2 ರ ಗಾಂಧಿ ಜಯಂತಿವರೆಗೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಹಮ್ಮಿಕೊಳ್ಳಲಾಗಿದೆ. ಜನಸೇವೆ ಮೂಲಕ ಸಮಾಜ ಸೇವೆ ಮಾಡಬೇಕು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯವಾಗಿದೆ ಎಂದರು.

ಶಿಬಿರ ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸುವಂತಾಗಬೇಕು. ಪ್ರತಿಯೊಬ್ಬರ ಜೀವಕ್ಕೆ ರಕ್ತದಾನ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ರಕ್ತಕ್ಕೆ ಬೇಡಿಕೆ ಹೆಚ್ಚಿದೆ. ಆದ್ದರಿಂದ ರಕ್ತದಾನ ಮಾಡುವಂತಾಗಬೇಕು.

ರಕ್ತದಾನ ಮಾಡುವುದರಿಂದ ಯಾವುದೇ ರೀತಿ ಸಮಸ್ಯೆ ಇರುವುದಿಲ್ಲ ಎಂದು ಶಾಸಕರು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಡೀ ವಿಶ್ವ ಗಮನಿಸುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಡೀ ವಿಶ್ವದ ಬಲಿಷ್ಠ ರಾಷ್ಟ್ರಗಳಿಗೆ ಸಲಹೆ ಮಾಡುವ ಮಟ್ಟಕ್ಕೆ ಭಾರತ ಹೆಜ್ಜೆ ಹಾಕಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ರಕ್ತದಾನ ಶಿಬಿರಕ್ಕೆ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಅವರು ಕೋರಿದರು.

ಇದೇ ಸಂದರ್ಭದಲ್ಲಿ ಅಪೌಷ್ಟಿಕತೆ ಉಂಟಾಗಿರುವವರಿಗೆ ರೆಡ್ ಸಂಸ್ಥೆಯಿಂದ ಆಹಾರ ಕಿಟ್ ಅನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿತರಿಸಿದರು. ಜಿಲ್ಲಾ ಆಕ್ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಉಪಾಧ್ಯಕ್ಷರಾದ ಎಚ್.ಟಿ.ಅನಿಲ್, ರಕ್ತನಿಧಿ ಕೇಂದ್ರದ ಸುನಿತಾ, ಮುರಳೀಧರ, ಕಮಲ, ಇತರರು ಇದ್ದರು.

error: Content is protected !!