fbpx

ರವಿ ಕುಶಾಲಪ್ಪ ಅವರಿಗೆ ಭರ್ಜರಿ ಸ್ವಾಗತ

ಇಂದು ಬೆಳಗ್ಗೆ ಹತ್ತು ಗಂಟೆಗೆ ಕುಶಾಲನಗರದ ಕೊಪ್ಪ ಗೇಟ್ ಬಳಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀಯುತ ರವಿ ಕುಶಾಲಪ್ಪರವರನ್ನು ಸ್ವಾಗತಿಸಲಾಯಿತು.

ಗೇಟ್ ಬಳಿ ಇರುವ ಕಾವೇರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಶ್ರೀಯುತ ರವಿ ಕುಶಾಲಪ್ಪನವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮುಖಾಂತರ ಕುಶಾಲನಗರದ ಶ್ರೀ ಗಣಪತಿ ದೇವಾಲಯಕ್ಕೆ ಪೂಜೆ ಸಲ್ಲಿಸಲು ಕರೆತರಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಮಾದಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಸತೀಶ್, ರೂಪ ಸತೀಶ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶರಿನ್ ಸುಬ್ಬಯ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ಪೂವ್ಯಯ, ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೃಷ್ಣಪ್ಪ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೊಯಪ್ಪ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನವನೀತ್,ಜಿಲ್ಲಾ ಸಮಿತಿ ಸದಸ್ಯ ರಾಮನಾಥನ್, ಕುಶಾಲನಗರ ಯುವ ಮೋರ್ಚಾ ನಗರ ಅಧ್ಯಕ್ಷರಾದ ಸುಮಂತ್, ಹಾಗೂ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

error: Content is protected !!