ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ



ನೀರಾವರಿ ಇಲಾಖೆಯ ವತಿಯಿಂದ 2.25 ಕೋಟಿ ವೆಚ್ಚದ ತೊರೆನೂರು ಸರ್ಕಲ್ ನಿಂದ ಸೋಮವಾರಪೇಟೆಯ ಸಂಪರ್ಕ ರಸ್ತೆಯಿಂದ ಭೈರಪ್ಪನಗುಡಿವರೆಗಿನ ರಸ್ತೆ ಮತ್ತು ತೊರೆನೂರು ಗ್ರಾಮದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರಸ್ತೆ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚುರಂಜನ್ ಭೂಮಿ ಪೂಜೆ ನೆರವೇರಿಸಿದರು.
ಗ್ರಾಮೀಣ ಪ್ರದೇಶದ ರಸ್ತೆಯ ಅಭಿವೃದ್ಧಿಗೆ ನೀರಾವರಿ ಇಲಾಖೆ ಮತ್ತು ಲೊಕೋಪಯೋಗಿ ಇಲಾಖೆಯ ಮೂಲಕ ಹಣ ಬಿಡುಗಡೆ ಮಾಡಲಾಗಿದ್ದು, ಟೆಂಡರ್ ಪ್ರಕ್ರಿಯೆಯ ಮೂಲಕ ಕಾಮಗಾರಿಯನ್ನು ಆರಂಭಿಸಲಾಗಿದೆ ಎಂದು ರಂಜನ್ ತಿಳಿಸಿದರು.