ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಿ: ಸರ್ಕಾರ ಆದೇಶ

ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಆನ್ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್ ನೀಡಲಾಗಿದ್ದು, ರಾಜ್ಯದಲ್ಲಿ ಇಂದಿನಿಂದ ಆನ್ಲೈನ್ ಗ್ಯಾಂಬ್ಲಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್ಜಿ ಆಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆಪ್ ಗಳನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗಷ್ಟೇ ಸರ್ಕಾರ ಆನ್ಲೈನ್ ಗೇಮ್, ಆನ್ಲೈನ್ ಜೂಜು, ಬೆಟ್ಟಿಂಗ್ಗೆ ನಿಷೇಧ ಹೇರಿತ್ತು. ಇದೀಗ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಆನ್ಲೈನ್ ಜೂಜು ನಿಷೇಧದ ಆದೇಶ ಅಧಿಕೃತವಾಗಿ ಹೊರಬಿದ್ದಿದೆ.
ಇತ್ತೀಚೆಗಷ್ಟೇ ಸರ್ಕಾರ ಲಾಟರಿ ಹೊರತುಪಡಿಸಿ, ಕಂಪ್ಯೂಟರ್ ಮತ್ತು ಮೊಬೈಲ್ ಸೇರಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಹಣದ ವ್ಯವಹಾರ ನಡೆಸುವ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿತ್ತು.