ರಾಜ್ಯದಲ್ಲಿ ನಾಳೆಯಿಂದ ಏ.10 ರವರೆಗೆ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 6 ರಂದು, ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದ್ದು, ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, , ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಮಾಹಿತಿ ನೀಡಿದೆ.

error: Content is protected !!