ರಾಜ್ಯದಲ್ಲೇ ಕೊಡಗಿನ ಡಿಸಿಸಿ ಬ್ಯಾಂಕ್ ಉತ್ತಮ ಕಾರ್ಯ: ಸಚಿವ ಸೋಮಶೇಖರ್

ರಾಜ್ಯದ 21 ಡಿಸಿಸಿ ಬ್ಯಾಂಕ್ಗಳ ಪೈಕಿ ಕೊಡಗು ಜಿಲ್ಲೆಯ ಡಿಸಿಸಿ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ರೈತರಿಗೆ ಸಾಲ ಸೌಲಭ್ಯ ಮತ್ತಿತರ ಸೌಲಭ್ಯಗಳನ್ನು ಒದಗಿಸುವಲ್ಲಿ ಡಿಸಿಸಿ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರ ಆದೇಶ ಹೊರಡಿಸಿದಲ್ಲಿ ಆ ಆದೇಶದಲ್ಲಿ ರೈತರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಚಿಕ್ಕಪುಟ್ಟ ದೋಷಗಳಿದ್ದಲ್ಲಿ ಸ್ಥಳೀಯ ಶಾಸಕರು ಸರ್ಕಾರದ ಗಮನಕ್ಕೆ ತಂದು ರೈತರಿಗೆ ಅನ್ಯಾಯವಾಗದಂತೆ ಆದೇಶಗಳನ್ನು ರೂಪಿಸಬೇಕು ಎಂದು ತಿಳಿಸುತ್ತಾ, ಇದು ಅವರ ರೈತರ ಬಗೆಗಿನ ಹಾಗೂ ಸಹಕಾರ ಕ್ಷೇತ್ರದ ಬಗೆಗಿನ ಕಾಳಜಿ ವ್ಯಕ್ತಪಡಿಸುತ್ತದೆ ಎಂದು ಅವರು ತಿಳಿಸಿದರು.
2021 ರ ಆಗಸ್ಟ್, 20 ಕ್ಕೆ ಜಿಲ್ಲೆಯ ಡಿಸಿಸಿ ಬ್ಯಾಂಕ್ 100 ವರ್ಷ ಪೂರ್ಣಗೊಳಿಸಿ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ ಬ್ಯಾಂಕಿನ ಆಡಳಿತ ವರ್ಗ, ಸ್ಥಳೀಯ ಪ್ರತಿನಿಧಿಗಳ ಸಹಕಾರದಿಂದ ಪಾರದರ್ಶಕವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

error: Content is protected !!