fbpx

ರಾಜ್ಯದ ಗ್ರಾಮಪಂಚಾಯಿತಿ ಅಧ್ಯಕ್ಷರು, ಸದಸ್ಯರಿಗೆ ಭರ್ಜರಿ ಸಿಹಿ ಸುದ್ದಿ : ಗೌರವಧನ ಹೆಚ್ಚಳ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಸದಸ್ಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗ್ರಾ.ಪಂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮೇಲ್ಮನೆಯಲ್ಲಿ ಈ ಕುರಿತು ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ರಾಜ್ಯದ ಗ್ರಾಮಪಂಚಾಯಿತಿ ಸದಸ್ಯರ ಗೌರವಧನವನ್ನು 2010, 2014 ಮತ್ತು 2017 ರಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಅಧ್ಯಕ್ಷರಿಗೆ 3 ಸಾವಿರ ರೂ. ಉಪಾಧ್ಯಕ್ಷರಿಗೆ 2 ಸಾವಿರ ರೂ. ಸದಸ್ಯರಿಗೆ ಒಂದು ಸಾವಿರ ರೂ. ಗೌರವಧನವಿದ್ದು, ದುಪ್ಪಟ್ಟಾದರೆ ಕ್ರಮವಾಗಿ 6 ಸಾವಿರ ರೂ. 4 ಸಾವಿರ ರೂ. 2 ಸಾವಿರ ರೂ.ಗೆ ಏರಿಕೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ತಾಳೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಚಿತ ಬಸ್ ಪಾಸ್ ನೀಡಲು ಪರಿಶೀಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.

error: Content is protected !!