ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭ : ಸಚಿವ ಪ್ರಭು ಚೌಹಾಣ್

ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಸಂಪೂರ್ಣ ಜಾರಿಯಾಗುತ್ತದೆ. ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಹೇಳಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ ಗೋಪಾಲಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತೇವೆ.
50ರಿಂದ 100 ಎಕರೆ ಪ್ರದೇಶದಲ್ಲಿ ಗೋಶಾಲೆ ನಿರ್ಮಾಣ ಮಾಡುತ್ತೇವೆ. ಬೆಳಗಾವಿ ಅಧಿವೇಶನ ಮುಗಿದ ನಂತರ 25 ಜಿಲ್ಲೆಗಳಲ್ಲಿ ಗೋಶಾಲೆ ಆರಂಭಿಸಲಾಗುವುದು ಎಂದರು.
ಗೋಹತ್ಯೆ ಮಾಡಿದವರಿಗೆ ಭವಿಷ್ಯದಲ್ಲಿ ದಂಡದ ಪ್ರಮಾಣ 50 ಸಾವಿರದಿಂದ 10 ಲಕ್ಷ ರೂಪಾಯಿ ಆಗಲಿದೆ. ಏಳು ವರ್ಷಗಳ ಜೈಲುವಾಸಕ್ಕೂ ಅವಕಾಶವಿದೆ. ತಾಲೂಕಿಗೆ ಒಂದು ಸುಸಜ್ಜಿತ ಅಂಬುಲೆನ್ಸ್ ನೀಡುತ್ತೇವೆ. ಪ್ರಾಣಿ ಸಹಾಯವಾಣಿ ಕೇಂದ್ರ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ.