ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನುಗಳಲ್ಲಿ ಫ್ರೀ ತಿಂಡಿ, ಊಟ!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಉಳಿದೆಲ್ಲ ಕಡೆ ಸದ್ಯ ಇರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟಗಳನ್ನು ಉಚಿತವಾಗಿ ಒದಗಿಸುವಂತೆ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಮೇ 24 ರವರೆಗೂ ಅಂದ್ರೆ ಲಾಕ್ಡೌನ್ ಮುಗಿಯುವವರೆಗೂ ಇರಲಿದೆ. ಕೂಲಿ ಕಾರ್ಮಿಕರು, ವಲಸಿಗರು ಮತ್ತು ದುರ್ಬಲ ವರ್ಗದವರಿಗೆ ಅನುಕೂಲವಾಗಲೆಂದು ಪೌರಾಡಳಿತ ಸಚಿವಾಲಯ ಈ ಆದೇಶ ಹೊರಡಿಸಿರೋದಾಗಿ ಹೇಳಿದೆ.