ರಾಜ್ಯ ಬಿಜೆಪಿ ಸ. ಪ್ರ. ಕಾರ್ಯದರ್ಶಿ ರಾಜೇಶ್ ಕೊಡಗು ಜಿಲ್ಲೆಗೆ ಭೇಟಿ

ನಿನ್ನೆ ದಿನ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಜಿ ವಿ ರಾಜೇಶ್ ಅವರು ಮಡಿಕೇರಿಯ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.

ಕೊಡಗಿನಲ್ಲಿ ಬಿಜೆಪಿ ಪಕ್ಷ ಸಂಘಟನೆ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ಸುಜಾ ಕುಶಾಲಪ್ಪ, ಮುಖಂಡ ಕಾಳಚಂಡ ಅಪ್ಪಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್ ಕೆ ಮಾದಪ್ಪ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಶರೀನ್ ಸುಬ್ಬಯ್ಯ, ಪ್ರ.ಕಾರ್ಯದರ್ಶಿ ಅನಿತಾ ಪೂವಯ್ಯ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.