ರಾತ್ರಿ ಕಫ್ಯೂ ೯ ಮತ್ತು ವಾರಾಂತ್ಯ ಬಂದ್‍ಗೆ ಸಹಕರಿಸಲು ಜಿಲ್ಲಾಡಳಿತ ಮನವಿ

ಕೊಡಗು: ಕೋವಿಡ್ 19 ನಿಯಂತ್ರಣಕ್ಕಾಗಿ ಸರ್ಕಾರ ಮೇ 4 ರವರೆಗೆ ಕಠಿಣ ಮಾರ್ಗಸೂಚಿ ಹೊರಡಿಸಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತಾಗಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯ ಸರ್ಕರ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಲ್ಲಿ ಕೋರಿದರು.

ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಮಾತನಾಡಿ ಸರ್ಕರ ಹೊರಡಿಸಿರುವ ಹೊಸ ಮಾರ್ಗಸೂಚಿಯನ್ನು ಚಾಚುತಪ್ಪದೆ ಪಾಲಿಸಬೇಕು. ಜಿಲ್ಲೆಯಾದ್ಯಂತ ಮೇ 4 ರವರೆಗೆ ರಾತ್ರಿ 9 ರಿಂದ ಬೆಳಗ್ಗೆ 6 ವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿದೆ. ಹಾಗೆಯೇ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ವರೆಗೆ ಪೂರ್ಣವಾಗಿ ಕಫ್ರ್ಯೂ ಹೇರಲಾಗಿದ್ದು, ಅದನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ರಾತ್ರಿ ಕಫ್ರ್ಯೂ ಸಮಯದಲ್ಲಿ ತುರ್ತು ಸಂಚಾರ ಹೊರತುಪಡಿಸಿ, ಉಳಿದ ಎಲ್ಲ ವಾಹನ ಸಂಚಾರ ಬಂದ್ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರದಂದು ಪೂರ್ತಿ ಕಫ್ರ್ಯೂ ಇರಲಿದೆ. ನ್ಯಾಯಬೆಲೆ ಅಂಗಡಿ, ಆಹಾರ, ಧವಸಧಾನ್ಯ, ಹಣ್ಣು ತರಕಾರಿ, ಹಾಲು ಉತ್ಪನ್ನಗಳಿಗೆ ಅವಕಾಶವಿದ್ದು, ತೆರೆದ ಪ್ರದೇಶಗಳಲ್ಲಿ ಸಗಟು, ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ ಇದೆ ಎಂದು ತಿಳಿಸಿದರು.

ಪವಾರಾಂತ್ಯದ ಕಫ್ರ್ಯೂ ಅವಧಿಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ರವರೆಗೆ ಆಹಾರ, ದಿನಸಿ, ಹಣ್ಣು ಹಂಪಲು, ತರಕಾರಿ, ಹಾಲಿನ ಉತ್ಪನ್ನಗಳು ಮಾರಾಟ ಮಳಿಗೆಯನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸರಕಾರದ ಹೊಸ ಮಾರ್ಗಸೂಚಿ ಅನ್ವಯ ಮದುವೆಗೆ ಕೇವಲ 50 ಜನ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂತ್ಯಕ್ರಿಯೆಗೆ 20 ಜನರು ಮಾತ್ರ ಪಾಲ್ಗೊಳ್ಳಬಹುದಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಗಳು ಮಾರ್ಗಸೂಚಿ ನಿಯಮ ಪಾಲನೆಗೆ ಕ್ರಮ ಜರುಗಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್, ಯೋಗಾ ಕೇಂದ್ರ, ಈಜುಗೊಳ, ಸ್ಪೊಟ್ರ್ಸ್ ಕಾಂಪ್ಲೆಕ್ಸ್, ಬಾರ್, ಆಡಿಟೋರಿಯಂ ನಂತಹ ಸ್ಥಳಗಳನ್ನು ತೆರೆಯುವದನ್ನು ನಿμÉೀಧಿಸಲಾಗಿದೆ. ಜಿಲ್ಲೆಯಲ್ಲಿರುವ ಹೋಟೆಲ್ ಮತ್ತು ರೆಸ್ಟೋರೆಂಟ್ ಹಾಗೂ ಬಾರ್, ಎಂಆರ್‍ಪಿಗಳಲ್ಲಿ ಪಾರ್ಸಲ್‍ಗೆ ಅವಕಾಶವಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿರುವ ದೇವಸ್ಥಾನಗಳಿಗೆ ಪೂಜೆಗೆ ಅವಕಾಶ ಕಲ್ಪಿಸಿಲಾಗಿದೆ. ಸಾರ್ವಜನಿಕ ಸಾರಿಗೆ ವಾಹನದಲ್ಲಿ ಶೇ.50 ರಷ್ಟು ಮೀರದಂತೆ ಸಂಚರಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಹೇಳಿದರು.

ಜಿಲ್ಲೆಯಲ್ಲಿರುವ ಪ್ರತಿಯೊಂದು ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ತಿಳಿಸಿದ್ದು, ಆನ್‍ಲೈನ್ ಕ್ಲಾಸ್‍ಗೆ ಮಾತ್ರ ಅವಕಾಶವಿದೆ ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ ಇದೆ. ಜಿಲ್ಲೆ ಮತ್ತು ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ರೀತಿಯ ನಿರ್ಬಂಧವಿರುವುದಿಲ್ಲ. ಸಾರ್ವಜನಿಕ ಸಂಚಾರಕ್ಕೆ ಸಾರಿಗೆ ವ್ಯವಸ್ಥೆ ಇರಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

error: Content is protected !!