fbpx

ರಾಷ್ಟ್ರೀಯ ಕ್ರೀಡಾ ದಿನಾಚರಣೆ – ಹಾಕಿ ಕೋಚ್ ಅಂಕಿತಾ ಸುರೇಶ್ ಗೆ ಸನ್ಮಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾದಿನಾಚರಣೆ ಸಮಾರಂಭದಲ್ಲಿ ಟೋಕಿಯೋ ಒಲಂಪಿಕ್ಸ್ ನ ಭಾರತ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಆಗಿದ್ದ ಸುಂಟಿಕೊಪ್ಪ ಕಂಬಿಬಾಣೆಯ ಅಂಕಿತಾ ಸುರೇಶ್ ಅವರನ್ನು ಸನ್ಮಾನಿಸಲಾಯಿತು. ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡವು 40 ವರ್ಷಗಳ ತರುವಾಯ ಉತ್ತಮ ಸಾಧನೆ ತೋರುವಲ್ಲಿ ಪ್ರಸ್ತುತ ಭಾರತ ಮಹಿಳಾ ಹಾಕಿ ತಂಡದ ಕೋಚ್ ಆಗಿರುವ ಅಂಕಿತಾ ಸುರೇಶ್ ಅವರ ಪರಿಶ್ರಮವಿರುವುದರಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ನಾರಾಯಣ ಗೌಡ, ಆಯುಕ್ತರಾದ ವೆಂಕಟೇಶ್ ಕುಮಾರ್ ಹಾಗೂ ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದೇರಾಜ್ ಅವರು ಶಾಲು ಹೊದಿಸಿ ಸನ್ಮಾನಿಸಿದರು.

error: Content is protected !!