fbpx

ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮ್ಮೇಳನಕ್ಕೆ ಕೊಡಗಿನ ಇಬ್ಬರು ಕಿರಿಯ ವಿಜ್ಞಾನಿಗಳು ಆಯ್ಕೆ

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ(ಎನ್‍ಸಿಎಸ್‍ಟಿಸಿ), ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ನಡೆದ ರಾಜ್ಯ ಮಟ್ಟದ 28 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮ್ಮೇಳನ 2020 ದಲ್ಲಿ ಕೊಡಗಿನ ಇಬ್ಬರು ಕಿರಿಯ ವಿಜ್ಞಾನಿಗಳು ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.

ಕೋವಿಡ್- 19 ರ ಮಾರ್ಗಸೂಚಿ ಅನ್ವಯ ಭೌತಿಕ ಸಮ್ಮೇಳನಕ್ಕೆ ಪರ್ಯಾಯವಾಗಿ ಆನ್‍ಲೈನ್ ಮೂಲಕ ನಡೆದ ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮ್ಮೇಳನದಲ್ಲಿ ಜಿಲ್ಲೆಯ ಮಡಿಕೇರಿ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಾದ ಸಿ.ಎಸ್.ರಘುವಂಶಿ ಹಾಗೂ ಕೆ.ಕೆ.ಮಹಿಮ್ ಆಯ್ಕೆಯಾಗಿದ್ದಾರೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.

“ಸುಸ್ಥಿರ ಜೀವನಕ್ಕಾಗಿ ವಿಜ್ಞಾನ” ಎಂಬ ಕೇಂದ್ರ ವಿಷಯದಡಿ ನಡೆದ ರಾಜ್ಯ ಮಟ್ಟದ ಸಮಾವೇಶದಲ್ಲಿ ಕಿರಿಯ ವಿಭಾಗದಲ್ಲಿ ಮಾರ್ಗದರ್ಶಿ ಶಿಕ್ಷಕಿ ಎಂ.ಎಸ್.ಶೃತಿ ಮಾರ್ಗದರ್ಶನದಲ್ಲಿ ತಂಡದ ನಾಯಕ ಸಿ.ಎಸ್.ರಘುವಂಶಿ ಮತ್ತು ತಂಡದ ಸದಸ್ಯ ಎನ್.ಆರ್.ಸಮನ್ಯು ತಂಡವು “ಕೊಡಗಿನಲ್ಲಿ ಶೋಲಾ ಅರಣ್ಯಗಳು” ಎಂಬ ಉಪ ವಿಷಯದಡಿ ಮಂಡಿಸಿದ ವೈಜ್ಞಾನಿಕ ಪ್ರಬಂಧ ಹಾಗೂ ಹಿರಿಯ ವಿಭಾಗದಲ್ಲಿ ಮಾರ್ಗದರ್ಶಿ ಶಿಕ್ಷಕ ಎಂ.ಲೋಹಿತ್ ಚಂಗಪ್ಪ ಮಾರ್ಗದರ್ಶನದಲ್ಲಿ ತಂಡದ ನಾಯಕ ಕೆ.ಕೆ.ಮಹಿನ್ ಮತ್ತು ತಂಡದ ಸದಸ್ಯ ಪುರಬ್ ಪೆÇನ್ನಪ್ಪ ತಂಡವು “ರಾಸಾಯನಿಕ ಕೀಟನಾಶಕವು ವರವೋ- ಶಾಪವೋ” ಎಂಬ ಉಪ ವಿಷಯದ ಕುರಿತು ಉತ್ತಮವಾಗಿ ಮಂಡಿಸಿದ ವೈಜ್ಞಾನಿಕ ಪ್ರಬಂಧವು ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮ್ಮೇಳನಕ್ಕೆ ಅರ್ಹತೆ ಪಡೆದಿದೆ ಎಂದು ವಿಜ್ಞಾನ ಪರಿಷತ್ತಿನ ಕಾರ್ಯಕ್ರಮ ಸಂಘಟಕ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.

error: Content is protected !!