fbpx

ರೈತ ಕುಟುಂಬದ ಮಕ್ಕಳಿಗೆ ಶುಭ ಸುದ್ದಿ!

ತುಮಕೂರು : ಸರ್ಕಾರವು ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೃಷಿ ವೃತ್ತಿಪರ ಕೋರ್ಸ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಹೊಸ ಕೃಷಿ ಕಾಲೇಜು ಪ್ರಾರಂಭಿಸಲು ಖಾಸಗಿಯವರಿಗೆ ಅವಕಾಶ ನೀಡಲು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

error: Content is protected !!