ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ

ಅಪಘಾತ ನಡೆದ ಸಂಬಂಧ ಬೈಕ್ ಹೊತ್ತಿ ಉರಿದು ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಮೂಲದ ಸವಾರ ಸಾವನಪ್ಪಿರುವ ಘಟನೆ ಹುಣಸೂರು ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಕಲ್ಬೆಟ್ಟ ಜಂಕ್ಷನ್ ನಲ್ಲಿ ನಡೆದಿದೆ.ಮೃತ ಸವಾರ ಮಡಿಕೇರಿ ತಾಲ್ಲೂಕಿನ ಕೈಕ್ಕಾಡು ಗ್ರಾಮದ ಬಿ.ಪಿ ಮುತ್ತಣ್ಣ(35) ಎಂದು ಗುರುತಿಸಲಾಗಿದೆ.
ಹುಣಸೂರಿನಿಂದ ಮಡಿಕೇರಿಯತ್ತ ತೆರಳುತ್ತಿದ್ದ ಮುತ್ತಣ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಪೆಟ್ರೋಲ್ ಟ್ಯಾಂಕ್ ಸೋರಿಕೆಯಿಂದ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು,ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ವೇಳೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಹುಣಸೂರು ಗ್ರಾಮಾಂತರ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.