ಲೋಕೋಪಯೋಗಿ ಇಲಾಖೆಯ ವಿರುದ್ಧ ಸಾರ್ವಜನಿಕರ ಆಕ್ರೋಶ

ಸೋಮವಾರಪೇಟೆ: ಲೋಕೋಪಯೋಗಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಅನೇಕ ಕಾಮಗಾರಿಗಳು ಕಳಪೆಯಾಗಿದ್ದು ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕಂದು ಒತ್ತಾಯಿಸಿ, ಸೋಮವಾರಪೇಟೆ ತಾಲ್ಲೂಕಿನ ಲೋಕೋಪಯೋಗಿ ಕಚೇರಿ ಎದುರು ಆರ್.ಟಿ.ಐ ಕಾರ್ಯಕರ್ತ ಬಿ.ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ಕಳಪೆ ಕಾಮಗಾರಿಯಿಂದ ಸರ್ಕಾರದ ಹಣ ಪೋಲಾಗುತ್ತಿದೆ. ಕಾಮಗಾರಿಗಳು ಹೆಚ್ಚಿನ ದಿನ ಬಾಳುತ್ತಿಲ್ಲ, ಕೆಲವು ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಪ್ರಕರಣ ಗಳು ನಡೆದಿವೆ. ಪ್ರತೀ ಕಾಮಗಾರಿಗಳು ನುರಿತ ತಜ್ಞರು ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.