fbpx

ವಾಣಿಜ್ಯೋದ್ಯಮ ವಿವಿಧೋದ್ದೇಶ ಸಹಕಾರ ಸಂಘಕ್ಕೆ ನೇಮಕ

ಕೊಡಗು ಜಿಲ್ಲೆಯ ವಾಣಿಜ್ಯೋದ್ಯಮ ವಿವಿಧೋದ್ದೇಶ ಸಹಕಾರ ಸಂಘ (ಚೇಂಬರ್ ಆಫ್ ಕಾಮರ್ಸ್)ಗೆ ಬಿಜೆಪಿ ಬೆಂಬಲಿತ ಕುಶಾಲನಗರದ ಬಿ.ರಾಮಕೃಷ್ಣ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಿದ್ದಾಪುರದ ಕೆ.ಕೆ ಶ್ರೀನಿವಾಸ್ ನೇಮಕಗೊಂಡಿದ್ದಾರೆ.

ನಾಮಪತ್ರ ಸಲ್ಲಿಸಿದ್ದ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ ಗಣೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಸವಿತಾ ರೈ, ಮುನೀರ್ ಅಹಮದ್ ಕಡೇ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.ಒಟ್ಟು 14 ಆಡಳಿತ ಮಂಡಳಿಯ ಸದಸ್ಯರಲ್ಲಿ 9 ಮಂದಿ ಬಿಜೆಪಿ ಬೆಂಬಲಿತ ಅಭ್ಯಾರ್ಥಿಗಳು ಇದ್ದ ಕಾರಣ ನಾಮಪತ್ರ ವಾಪಸ್ ಪಡೆಯಲಾಗಿದೆ ಎನ್ನಲಾಗಿದೆ.

error: Content is protected !!