ವಾಯುಭಾರ ಕುಸಿತದಿಂದ ಮಳೆ ಸಾಧ್ಯತೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28 ರ ಬಳಿಕ ಮುಂಗಾರು ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನದಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 28 ರಿಂದ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂಊರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ.