|ವಾಯುಭಾರ ಕುಸಿತ| ಮತ್ತೆ ಮಳೆಯ ಅಬ್ಬರ ಸಾಧ್ಯತೆ|

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.
ಕೊಡಗು , ಮೈಸೂರು, ಚಾಮರಾಜನಗರ ಮತ್ತು ಕೋಲಾರದಲ್ಲಿ ಮುಂದಿನ ಮೂರು ದಿನ ಮತ್ತು ಆ.24ರಂದು ಭಾರಿ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಚದುರಿದಂತೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ವಾತಾವರಣ ಬದಲು: ವಾರದಿಂದ ಮಳೆ ಕುಂಠಿತ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ದಿಢೀರ್ ಏರಿಕೆಯಾಗಿತ್ತು. ವಾರದಲ್ಲಿದ್ದ 22-24 ಡಿಗ್ರಿ ಸೆಲ್ಸಿಯಸ್‌ನಿಂದ 30-32 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿತ್ತು. ಇದೀಗ ದಿಢೀರ್ ವಾತಾವರಣದಲ್ಲಿ ಬದಲಾವಣೆಯಾದ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ.