ವಾರದ ಎಲ್ಲ ದಿನವೂ ಪಡಿತರ ಅಂಗಡಿಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರದಿಂದ ಸೂಚನೆ

ಕೇಂದ್ರದಿಂದ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ವಾರದ ಎಲ್ಲ ದಿನವೂ ಪಡಿತರ ಅಂಗಡಿಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ವಾರದ ಎಲ್ಲಾ ದಿನಗಳಲ್ಲೂ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು ಮತ್ತು ಹೆಚ್ಚು ಅವಧಿ ಅಂಗಡಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ರಾಜ್ಯಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ ನೀಡಲಾಗಿದೆ.
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಹೆಚ್ಚುವರಿ ಅಕ್ಕಿ ವಿತರಣೆಗೆ ಕೇಂದ್ರ ಕ್ರಮಕೈಗೊಂಡಿದೆ.

ಬಡವರಿಗೆ ಉಚಿತವಾಗಿ ಆಹಾರ ಧಾನ್ಯಗಳು ಸಕಾಲದಲ್ಲಿ ಮತ್ತು ಸುರಕ್ಷಿತವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಅನೇಕ ರಾಜ್ಯಗಳಲ್ಲಿ ಪಡಿತರ ಸರಿಯಾಗಿ ವಿತರಣೆಯಾಗದಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

error: Content is protected !!