ವಿದ್ಯಾರ್ಥಿಗಳು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ; ಪುಟ್ಟರಾಜು

ಮಡಿಕೇರಿ ಸೆ.22:- ವಿದ್ಯಾರ್ಥಿಗಳು ಸಿಕ್ಕಿದ ವೇದಿಕೆಯನ್ನು ಬಳಸಿಕೊಳ್ಳಬೇಕು, ಇದರಿಂದ ಭವಿಷ್ಯದಲ್ಲಿ ಪ್ರಯೋಜನವಾಗಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಅತೀ ಮುಖ್ಯ, ಸ್ಪರ್ಧೆಯಲ್ಲಿ ಸೋಲು ಗೆಲುವುಗಳನ್ನು ಸಮನಾಂತರವಾಗಿ ಸ್ವೀಕರಿಸಿ, ಸೋಲು ಗೆಲುವಿನ ಮೆಟ್ಟಿಲು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪುಟ್ಟರಾಜು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮಗ್ರ ಶಿಕ್ಷಣ, ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಿಕ್ಕಿದ ಅವಕಾಶಗಳಲ್ಲಿ ಪ್ರತಿಭೆಯನ್ನು ತೋರಿಸಿ ಬಹುಮಾನ ಪಡೆಯುವಂತಾಗಬೇಕು ಎಂದು ಅವರು ತಿಳಿಸಿದರು.
ಸ್ಪರ್ಧೆಯಲ್ಲಿ 01 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು ನಡೆಯುತ್ತಿವೆ, ಎಲ್ಲರೂ ಉತ್ತಮ ಪೈಪೆÇೀಟಿಯೊಂದಿಗೆ ಸ್ಪರ್ಧಿಸಿ ಮುಂದೆ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲೂ ತಮ್ಮ ಪ್ರತಿಭೆಯನ್ನು ತೋರುವಂತಾಗಲಿ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ಸಂಯೋಜಕರಾದ ಮಾರುತಿ ಅರೋರ ಅವರು ಪ್ರತಿಭಾ ಕಾರಂಜಿ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ತೋರ್ಪಡಿಸುವ ಕಾರ್ಯಕ್ರಮ ಇದಾಗಿದೆ. ಮಕ್ಕಳಲ್ಲಿ ಯಾವ ರೀತಿಯ ಪ್ರತಿಭೆಯಿದೆ ಎಂದು ಊಹಿಸಲು ಅಸಾಧ್ಯ. ಇಂತಹ ಕಾರ್ಯಕ್ರಮದಿಂದ ಮಕ್ಕಳು ಕಲಿಕೆಯ ಜೊತೆ ಇನ್ನಿತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಅವರ ಪ್ರತಿಭೆಯು ಅನಾವರಣವಾಗುತ್ತದೆ ಎಂದು ಹೇಳಿದರು.
ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿüಕಾರಿ ಎಚ್.ಟಿ.ಮಂಜುನಾಥ್ ಅವರು ಕೋವಿಡ್ ನಂತರ ಮಕ್ಕಳ ಪ್ರತಿಭೆಯನ್ನು ಪ್ರದರ್ಶಿಸುವಂತಹ ಕಾರ್ಯಕ್ರಮ ಇದಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿರುವ ಪ್ರತಿಭೆಯು ಹೊರಜಗತ್ತಿಗೆ ಪರಿಚಯವಾಗುತ್ತದೆ ಇದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಶೋಭಾ ಜಿ. ಮಾತನಾಡಿ ಕೋವಿಡ್‍ನಿಂದ ಹೊರಬಂದು ಪ್ರಸ್ತುತ ಈ ವರ್ಷವೂ ಉತ್ತಮ ಚಟುವಟಿಕೆಯಿಂದ ಕೂಡಿದ ವರ್ಷವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಸಾಮಥ್ರ್ಯ ಇರುತ್ತದೆ. ಅದನ್ನು ವ್ಯಕ್ತಪಡಿಸಲು ಇದು ಉತ್ತಮ ವೇದಿಕೆ ಎಂದರು. ಮಕ್ಕಳ ಪ್ರತಿಭೆಯನ್ನು ಕಾರಂಜಿಯಂತೆ ಚಿಮ್ಮಿಸಲು ಈ ಕಾರ್ಯಕ್ರಮವು ಸಹಕಾರಿಯಾಗಲಿ ಎಂದು ಆಶಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಪೆÇನ್ನಚನ ಶ್ರೀನಿವಾಸ್ ಅವರು ಮಾತನಾಡಿ ಸ್ಪರ್ಧೆಯಲ್ಲಿ ಉತ್ತಮವಾದ ಪ್ರದರ್ಶನವನ್ನು ನೀಡಿ ಗೆಲುವು ನಿಮ್ಮದಾಗಿಸಿಕೊಳ್ಳಿ, ಮುಂದೆ ಬರುವಂತಹ ಎಲ್ಲಾ ಸ್ಪರ್ಧೆಗಳಲ್ಲೂ ಭಾಗವಹಿಸುವುದು ಮುಖ್ಯ ಎಂದು ಶುಭ ಹಾರೈಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ ಮಾತನಾಡಿ ಸುಮಾರು 13 ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯು ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿ ಯಶಸ್ಸನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಸಂತ ಮೈಕಲರ ಪ್ರೌಢಶಾಲೆಯ
ಮುಖ್ಯೋಪಾಧ್ಯಾಯರಾದ ಜಾನ್ಸನ್, ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಿ.ಎಸ್. ರವಿಕೃಷ್ಣ, ಅನುದಾನಿತ ಪ್ರೌಢಶಾಲೆ ಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷರಾದ ಕೆ.ಎನ್.ಶಿವಪ್ರಸಾದ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯಾದ ಪಿ.ಕೆ.ನಲಿನಿ, ಕ್ಷೇತ್ರ ಶಿಕ್ಷಣ ಇಲಾಖೆಯ ಬಿಂದು ಮುಂತಾದವರು ಉಪಸ್ಥಿತರಿದ್ದರು. ಉಷಾ ಅವರು ಪ್ರಾರ್ಥಿಸಿದರು, ರೇಖಾ ನಿರೂಪಿಸಿದರು, ಹರೀಶ್ ವಂದಿಸಿದರು.