fbpx

ವಿದ್ಯಾರ್ಥಿನಿ ಆತ್ಮಹತ್ಯೆ

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಎಮ್ಮೆಗುಂಡಿ ತೋಟದ ಕಾರ್ಮಿಕ ಅಣ್ಣು ಎಂಬುವವರ ಪುತ್ರಿ (16) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ಈಕೆ ಇಂದು ಶಾಲೆಗೆ ಹೋಗದೇ ಓದಿಕೊಳ್ಳಲೆಂದು ತೋಟದ ಲೈನ್ ಮನೆಯಲ್ಲಿ ಉಳಿದುಕೊಂಡಿದ್ದಳು. ಮನೆಯವರು ಕೆಲಸಕ್ಕೆ ಹೋಗಿದ್ದು, ಸಂಜೆ ಹಿಂತಿರುಗಿ ಬಂದು ನೋಡಿದಾಗ ಮನೆಯೊಳಗೆ ವೇಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಮೃತದೇಹ ಕಂಡುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

error: Content is protected !!