fbpx

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಜೂ.08:-ವಿರಾಜಪೇಟೆ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೇ.75 ಸ್ಥಾನಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.25 ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿ ನಿಲಯಗಳ ವಿವರ: ಪೊನ್ನಂಪೇಟೆ, ಪಾಲಿಬೆಟ್ಟ ಮತ್ತು ವಿರಾಜಪೇಟೆ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ 9611296776, ಪೊನ್ನಂಪೇಟೆ ಮತ್ತು ಬಾಳೆಲೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ 7899323860 ಹಾಗೂ ವಿರಾಜಪೇಟೆ ಮತ್ತು ಕಾಕೋಟುಪರಂಬು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ 8105051491. ಈ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ, ಊಟ, ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರೆ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08274-249476 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!