fbpx

ವಿದ್ಯುತ್ ಶುಲ್ಕ ಮರು ಪಾವತಿ; ದೃಢೀಕೃತ ದಾಖಲಾತಿ ಸಲ್ಲಿಸಿ

ಕೊಡಗು ಜಿಲ್ಲಾ ವ್ಯಾಪ್ತಿಯ ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ 10 ಹೆಚ್‍ಪಿ ವರೆಗಿನ ನೀರಾವರಿ ವಿದ್ಯುತ್ ಪಂಪ್‍ಸೆಟ್ ಸ್ಥಾವರಗಳಿಗೆ ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್ ಬಳಕೆಯ ಮೇಲೆ ವಿಧಿಸುವ ವಿದ್ಯುತ್ ಶುಲ್ಕವನ್ನು ಷರತ್ತು ನಿಬಂಧನೆಗೊಳಪಟ್ಟು ಅರ್ಹ ಫಲಾಮಭವಿಗಳಿಗೆ ಡಿಬಿಟಿ (Direct Benefit Transfer) ಯೋಜನೆ ವ್ಯವಸ್ಥೆಯಡಿ ಸರ್ಕಾರದಿಂದ ಮರು ಪಾವತಿಸಲು ಆದೇಶ ಹೊರಡಿಸಲಾಗಿದೆ.
ಅರ್ಹ ಫಲಾನುಭವಿಗಳು ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರಾಗಿರುವ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ದೃಢೀಕರಣ ಪತ್ರವನ್ನು ಒದಗಿಸುವುದು ಕಡ್ಡಾಯವಾಗಿದೆ. ಅರ್ಹ ಫಲಾನುಭವಿಗಳು ಆಧಾರ್ ಕಾರ್ಡ್ ದೃಢೀಕೃತ ಪ್ರತಿ ಒದಗಿಸುವುದು ಕಡ್ಡಾಯವಾಗಿದೆ. ಆಧಾರ್ ಕಾರ್ಡ್‍ಗೆ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಒದಗಿಸುವುದು ಕಡ್ಡಾಯವಾಗಿದೆ.

ಫ್ರೂಟ್ಸ್ ಐಡಿ ಡಿಟೈಲ್ಸ್ (Farmer Registration and Unified Beneficiary Information System). ಅರ್ಹ ಫಲಾನುಭವಿಗಳ ಒಂದು ವಿದ್ಯುತ್ ಸ್ಥಾವರಕ್ಕೆ ಮಾತ್ರ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗುವುದು. ಅರ್ಹ ಫಲಾನುಭವಿಗಳು ಮಾಸಿಕ ವಿದ್ಯುತ್ ಶುಲ್ಕವನ್ನು ಸಂಪೂರ್ಣವಾಗಿ ನಿಗದಿತ ಸಮಯದಲ್ಲಿ ಪಾವತಿಸಬೇಕು. ನಂತರ ಸರ್ಕಾರವು ನೇರ ನಗದು ವರ್ಗಾವಣೆ ಮೂಲಕ ಮಾಸಿಕ ವಿದ್ಯುತ್ ಬಳಕೆ ಶುಲ್ಕದ ಮೇಲೆ ವಿಧಿಸುವ ವಿದ್ಯುತ್ ತೆರಿಗೆ ಹೊರತುಪಡಿಸಿ, ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮರುಪಾವತಿಸಲಾಗುವುದು.

ಆದ್ದರಿಂದ ಕೊಡಗು ಜಿಲ್ಲಾ ವ್ಯಾಪ್ತಿಯ ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯವನ್ನು ಪಡೆಯಲು ತಮ್ಮ ಹತ್ತಿರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ಕಾರ್ಯ ಮತ್ತು ಪಾಲನಾ ಉಪ ವಿಭಾಗ/ ಶಾಖಾ ಕಚೇರಿಗೆ ದೃಢೀಕೃತ ದಾಖಲಾತಿಗಳನ್ನು ಕೂಡಲೇ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಚಾಮುಂಡೇಶ್ವರಿ, ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ಕಚೇರಿ ಕೊಡಗು ಜಿಲ್ಲೆಯ 94495 98559/ 9449598541 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ತಿಳಿಸಿದ್ದಾರೆ.

error: Content is protected !!