ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು

ಮಡಿಕೇರಿ: ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಹಾಸಿಂ(೨೧) ಮಡಿಕೇರಿಯ ಡೈರಿ ಫಾರಂ ಬಳಿಯ ನೂತನವಾಗಿ ನಿರ್ಮಾಣ ಹಂತದಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿಯ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ.
ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆಯೇ ಪ್ರಾಣ ಹೋಗಿದೆ ಎಂದು ವೈದ್ಯರಿಂದ ತಿಳಿದು ಬಂದಿದೆ. ಪ್ರಕರಣವು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.