fbpx

ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಆನೆಗಳ ಶವ ಸಂಸ್ಕಾರ

ಕುಶಾಲನಗರ ತಾಲ್ಲೂಕಿನ ನೆಲ್ಯುದಿಕೇರಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವನಪ್ಪಿದ ಎರಡು ಕಾಡಾನೆಗಳ ಅಂತ್ಯಕ್ರಿಯೆಯನ್ನು ಸ್ಥಳದಲ್ಲೇ ನಡೆಸಲು ಅರಣ್ಯ ಇಲಾಖೆ ಮುಂದಾಗಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕಾಫಿ ತೋಟದಲ್ಲಿ ಆನೆಗಳ ಅಂತ್ಯಕ್ರಿಯೆ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಖಾಯಿಲೆಗಳು ಮತ್ತು ದುರ್ನಾತ ಬೀರುವುದರಿಂದ ಕಾರ್ಮಿಕರು ಕೆಲಸಕ್ಕೆ ಬಾರದಂತಾಗುವುದು ಎಂದು ಸ್ಥಳದಿಂದ ಸಾಗಿಸುವಂತೆ ತೋಟದ ಮಾಲೀಕರ ಒಮ್ಮತದ ಅಭಿಪ್ರಾಯಕ್ಕೆ ಮಣಿದ ಅರಣ್ಯ ಇಲಾಖೆ ,ಕ್ರೇನ್ ಮೂಲಕ ಎರಡು ಲಾರಿಗಳಲ್ಲಿ ಮೀನುಕೊಲ್ಲಿ ಅರಣ್ಯ ಪ್ರದೇಶಕ್ಕೆ ಸಾಗಿಸಿ ನಂತರ ಅಂತ್ಯಕ್ರಿಯೆ ನಡೆಸಲಾಯಿತು.

ಈ ನಡುವೆ ವಿದ್ಯುತ್ ಸ್ಪರ್ಶದಿಂದ ಆನೆಗಳು ಮೃತಪಟ್ಟ ಹಿನ್ನಲೆಯಲ್ಲಿ ವನ್ಯಜೀವಿ ಕಾಯ್ದೆ ಅಡಿಯಲ್ಲಿ ಸ್ಥಳೀಯ ಜೆಇ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

error: Content is protected !!