fbpx

ವಿಧಾನ ಪರಿಷತ್ ಚುನಾವಣೆ; ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿಗೆ ಕೊಡಗು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಚುನಾಯಿತರಾಗಿದ್ದ ಸುನೀಲ್ ಸುಬ್ರಮಣಿ.ಎಂ.ಪಿ. ಅವರ ಅವಧಿಯು 2022 ಜನವರಿ, 05 ಕ್ಕೆ ಮುಕ್ತಾಯಗೊಳ್ಳಲಿದ್ದು, ಈ ಸದಸ್ಯ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ.

ಆ ದಿಸೆಯಲ್ಲಿ ನವೆಂಬರ್, 16 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನವೆಂಬರ್, 23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನವೆಂಬರ್ 24 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನವೆಂಬರ್, 26 ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ. ಡಿಸೆಂಬರ್, 10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿಸೆಂಬರ್, 14 ರಂದು ಮತ ಎಣಿಕೆ ನಡೆಯಲಿದೆ. ಡಿಸೆಂಬರ್, 16 ಚುನಾವಣೆ ಮುಕ್ತಾಯವಾಗುವ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆ ಪೂರ್ಣ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವ್ಯಾಪ್ತಿಯಾಗಿದೆ. ಕೊಡಗು ಜಿಲ್ಲಾಧಿಕಾರಿ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರ ನೋಂದಣಾಧಿಕಾರಿ ಹಾಗೂ ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಮತ್ತು ಅಪರ ಜಿಲ್ಲಾಧಿಕಾರಿ ಅವರು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಮಾದರಿ ನೀತಿ ಸಂಹಿತೆಯು ತಕ್ಷಣದಿಂದಲೇ ಕೊಡಗು ಜಿಲ್ಲೆಯಾದ್ಯಾಂತ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

error: Content is protected !!