ವಿರಾಜಪೇಟೆ ಭಾಗದಲ್ಲಿ ಕೆ.ಜಿ.ಬಿ ಕಟ್ಟು ನಿಟ್ಟಿನ ನಿಯಮ ಪಾಲಿಸುವಂತೆ ಸೂಚನೆ

ಶಾಸಕರಾದ ಕೆ.ಜಿ.ಬೋಪಯ್ಯ ತಮ್ಮ ವಿಧಾನಸಭಾ ಕ್ಷೇತ್ರದ ಬಿಟ್ಟಂಗಾಲ, ಪೊನ್ನಂಪೇಟೆ ತಾಲೂಕಿನ ಬಿ. ಶೆಟ್ಟಿಗೇರಿ, ಹುದಿಕೇರಿ, ಬಿರುನಾಣಿ, ಟಿ. ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟ, ನಾಲ್ಕೇರಿ ಮತ್ತು ಅರುವತೋಕ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೊನಾ ಮಹಾಮಾರಿಯನ್ನು ತಡೆಗಟ್ಟುವ ಸಂಬಂಧ ಸಭೆ ನಡೆಸಿದರು, ಆಯಾ ಪಂಚಾಯ್ತಿ ವ್ಯಾಪ್ತಿಯಲ್ಲಿ ತಹಸೀಲ್ದಾರ್, ತಾಲೂಕು ಪಂಚಾಯತಿ ಆಡಳಿತಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ವೈದ್ಯಧಿಕಾರಿ, ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕೋವಿಡ್ ಜಾಗೃತಿ ಸಮಿತಿ ಸದಸ್ಯರು, ಗ್ರಾಮ ಪಂಚಾಯ್ತಿ ಸದಸ್ಯರು, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರುಗಳ ಸಮ್ಮುಖದಲ್ಲಿ ಸಭೆ ನಡೆಸಿ, ಕೊರೊನಾ ವೈರಸ್ ಹತೋಟಿಗೆ ತರುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಕೋವಿಡ್‌ ೧೯ ನಿಯಂತ್ರಣ ಬಗ್ಗೆ ಸರ್ಕಾರದ ಮಾರ್ಗಸೂಚಿ ಪಾಲಿಸುವುದು ಮತ್ತಿತರ ಬಗ್ಗೆ ಮಾಹಿತಿ ನೀಡಲಾಯಿತು. ಹಾಗೆಯೇ ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸೂಚಿಸಿದರು.

error: Content is protected !!