April 30, 2021

ವಿವಿಧ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

ಮಡಿಕೇರಿ ಏ.30: -ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಶುಕ್ರವಾರ ಸುಂಟಿಕೊಪ್ಪ, ಕುಶಾಲನಗರ ಹಾಗೂ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಶಾಲನಗರ ಮತ್ತು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಆಕ್ಸಿಜನ್ ನಿರ್ವಹಣಾ ವ್ಯವಸ್ಥೆ ಪರಿಶೀಲಿಸಿ ಮಾಹಿತಿ ಪಡೆದರು.
ಕುಶಾಲನಗರದ ಲಸಿಕಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಲ್ಲಿ ತೆರೆಯಲಾಗಿರುವ ಕೋವಿಡ್ ಕಂಟೈನ್ ಮೆಂಟ್ ವಲಯಗಳಿಗೆ ಭೇಟಿ ನೀಡಿದರು.

ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ತಹಶೀಲ್ದಾರ ಗೋವಿಂದರಾಜು ತಾಲ್ಲೂಕು ವೈದ್ಯಾಧಿಕಾರಿಗಳು, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಇತರರು ಇದ್ದರು.

error: Content is protected !!
satta king chart