ವೀಕ್ಷಣಾ ಸಭಾಂಗಣ ನಿರ್ಮಾಣ ಸ್ಥಳ ಪರಿಶೀಲನೆ

ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭೆ ಸಮಾರಂಭಗಳಲ್ಲಿ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು “ವೀಕ್ಷಣಾ ಸಭಾಂಗಣ (ಗ್ಯಾಲರಿ)” ನಿರ್ಮಾಣದ ಕಾಮಗಾರಿ ಕೈಗೊಳ್ಳುವ ಸಂಬಂಧ ಶಾಸಕ ಎಂ.ಪಿ ಅಪಚ್ಚು ರಂಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಮಗಾರಿಯ ಸಂಬಂಧ ಹಲವು ಸಲಹೆ ಸೂಚನೆಗಳನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ರವರಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭ ನಗರಾಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿಯ ಅಧ್ಯಕ್ಷ ಉಮೇಶ್ ಸುಬ್ರಮಣಿ,ಮಹೇಶ್ ಜೈನಿ, ಸತೀಶ್,ಅಪ್ಪಣ್ಣ,ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇದ್ದರು.