ವೃತ್ತಿಯಲ್ಲಿ ಜ್ಞಾನಾರ್ಜನೆ ನಿರಂತರವಾಗಿರಬೇಕು:ಎಂ ಭೃಂಗೇಶ್

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯಲ್ಲಿ ಪ್ಯಾನಲ್ ವಕೀಲರಿಗೆ ತರಬೇತಿ ಕಾರ್ಯಕ್ರಮವು ರೋಟರಿ ಸಭಾಂಗಣದಲ್ಲಿ ನಡೆಯಿತು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ ಭೃಂಗೇಶ್ ಮಾತನಾಡಿ ಹೊಸದಾಗಿ ವಕೀಲ ವೃತ್ತಿಯನ್ನು ಆರಂಭಿಸುವ ವಕೀಲರುಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಪ್ಯಾನಲ್ ವಕೀಲರಾಗಿ ನೇಮಕವಾಗುವುದು ಮತ್ತು ಉಚಿತ ವಕೀಲರಾಗಿ ಸೇವೆ ಸಲ್ಲಿಸುವುದು ಅವರಿಗೂ ಭವಿಷ್ಯದಲ್ಲಿ ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಅನುಭವ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದರು.