fbpx

ವೈದ್ಯರ ದಿನಾಚರಣೆ ಗಿಫ್ಟ್: ಪ್ರತೀ ನಾಲ್ಕು ಕ್ಷೇತ್ರಕ್ಕೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ

ರಾಜ್ಯದಲ್ಲಿನ ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತಿರುವುದರ ಜೊತೆಗೆ ಪ್ರತೀ ವಿಧಾನಸಭೆ ಕ್ಷೇತ್ರದಲ್ಲಿ ಸುಸಜ್ಜಿತ 100 ಹಾಸಿಗೆಗಳ ಆಸ್ಪತ್ರೆ ಹಾಗೂ ಪ್ರತೀ ನಾಲ್ಕು ಕ್ಷೇತ್ರಗಳಿಗೊಂದು ಸೂಪರ್ ಸ್ಪಷಾಲಿಟಿ ಆಸ್ಪತ್ರೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ವೈದ್ಯರ ದಿನಾಚರಣೆ ನಿಮಿತ ವೈದ್ಯರಿಗೆ ಶುಭಕೋರಿದ ಸ್ವತಃ ವೃತ್ತಿಯಲ್ಲಿ ವೈದ್ಯರು ಆಗಿರುವ ಸಚಿವರು ಬಹುಬೇಡಿಕೆ ಸೂಬರ್ ಸ್ಪಷಾಲಿಟೀ ಆಸ್ಪತ್ರೆ ಮತ್ತು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು 1,500 ಕೋಟಿ ರೂ ಮೀಸಲಿಡಲಾಗಿದೆ ಎಂದು ತಿಳಿಸಿದರು.

error: Content is protected !!