fbpx

ಶಾಲಾ.ಕ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ ಗಾಯನ ಸ್ಪರ್ಧೆ

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ೪ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. 29-11-2021 ರ ಸೋಮವಾರ ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಾನಪದ ಗೀತಗಾಯನ ಸ್ಪರ್ಧೆ ಮತ್ತು ಸಾರ್ವಜನಿಕರಿಗೆ ಭಾವಗೀತಾ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಬಳಗದ ಅಧ್ಯಕ್ಷ ‌ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ಸ್ಪರ್ಧೆಗಳು ಮಡಿಕೇರಿ ನಗರ ವ್ಯಾಪ್ತಿಗೆ ಸೀಮಿತಗೊಂಡಿರುತ್ತದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಶಾಲೆಯಿಂದ ಇಬ್ಬರಿಗೆ ಅವಕಾಶ ಕಲ್ಪಿಸಿಲಾಗಿದೆ.ಸ್ಪರ್ದೆಗೆ‌ ಬರುವಾಗ ಶಾಲಾ ದೃಢೀಕರಣ ಪತ್ರ ತರಬೇಕಾಗಿ ವಿನಂತಿ.

ಅದೇ ದಿನ ಸಂಜೆ 3.30 ಗಂಟೆಗೆ ನಡೆಯವ. ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ 2020-21 ರ ಸಾಲಿನಲ್ಲಿಎಸ್.ಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಜಿಲ್ಲೆಯ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿನಿಧಿ ಪ್ರಶಸ್ತಿ ವಿತರಣೆ ಮತ್ತು ಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ.

ಆಸಕ್ತರು ಬಳಗದ ಉಪಾಧ್ಯಕ್ಷೆ ಶ್ರೀಮತಿ ಪಿ ರೇವತಿ ರಮೇಶ್ ರವರ ದೂರವಾಣಿ ಸಂಖ್ಯೆ 9663254829 ಗೆ ಸಂಪರ್ಕಿಸಿ ನೋಂದಾಯಿಸಿ ಕೊಳ್ಳುವಂತೆ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫರ್ಡ್ ಕ್ರಾಸ್ತಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!