ಶಾಸಕ ಕೆ.ಜಿ ಬೋಪಯ್ಯರಿಂದ ಪಕ್ಷದ ಪ್ರಮುಖರ ಭೇಟಿ


ಕೊಡಗಿನಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಳಿಕ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರನ್ನು ಬೆಂಗಳೂರಿನಲ್ಲಿ ಶಾಸಕ ಕೆ.ಜಿ ಬೋಪಯ್ಯ ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಗೃಹ ಸಚಿವ ಅರಗ ಜ್ಞಾನೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ.ವಿ ರಾಜೇಶ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರನ್ನು ಭೇಟಿ ಮಾಡಿದ್ದಾರೆ.
ಮುಂಬರುವ ಚುನಾವಣೆ ಸಂಬಂಧ ಕಾಂಗ್ರೆಸ್ಸಿನ ವಿರುದ್ಧ ಮುಂದಿನ ಹೋರಾಟ, ಪಕ್ಷ ಸಂಘಟನೆ ಕುರಿತು ಭೇಟಿ ಮಾಡಿ ಮಾತು-ಕತೆ, ಚರ್ಚೆ ನಡೆಸಿದರು.