ಸಂಪೂರ್ಣ ಬಿಕೋ ಎನ್ನುತ್ತಿದೆ ಜಿಲ್ಲೆ!

ಮಡಿಕೇರಿ ಏ.24 : ಕೋವಿಡ್ ಸೋಂಕು ವ್ಯಾಪಿಸುತ್ತಿರುವುದನ್ನು ನಿಯಂತ್ರಿಸಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ತಂದ ಹಿನ್ನೆಲೆ ಕೊಡಗು ಜಿಲ್ಲೆ ಸ್ತಬ್ಧವಾಗಿದೆ.

ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆಯಲ್ಲದೆ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ಎಲ್ಲಾ ನಗರ ಹಾಗೂ ಪಟ್ಟಣಗಳು ಖಾಲಿ ಖಾಲಿಯಾಗಿದ್ದು, ಪೊಲೀಸರಷ್ಟೇ ಪ್ರಮುಖ ಸ್ಥಳಗಳಲ್ಲಿ ಕರ್ತವ್ಯ ನಿರತರಾಗಿದ್ದಾರೆ. ಔಷಧಿ ಅಂಗಡಿ ಮತ್ತು ವೈದ್ಯಕೀಯ ವ್ಯವಸ್ಥೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದಿರುವ ಸರಕು ಸಾಗಾಟದ ಲಾರಿ ಮತ್ತಿತರ ವಾಹನಗಳ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕೆಲವು ಲಾರಿಗಳನ್ನು ಪೊಲೀಸರು ತಡೆದರು. ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿದ್ದ ಯುವಕರನ್ನು ತಡೆದು ಲಾಠಿ ತೋರಿಸಿ ಗದರಿದರು. ಉಳಿದಂತೆ ಜಿಲ್ಲೆಯಾದ್ಯಂತ ಪರಿಸ್ಥಿತಿ ಶಾಂತವಾಗಿತ್ತು.
ಕೋವಿಡ್ ಆಸ್ಪತ್ರೆಯಲ್ಲಿ ಮಾತ್ರ ರೋಗಿಗಳ ಸಂಖ್ಯೆ ಹೆಚ್ಚು ಕಂಡು ಬಂತು.

error: Content is protected !!